ಹೇಮಾವತಿ
ಹೇಮಾವತಿ ನದಿಯು ಕಾವೇರಿ ನದಿಯ ಮುಖ್ಯ ಉಪನದಿಗಳಲ್ಲೊಂದು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಜಾವಳಿಯ ಪಶ್ಚಿಮ ಘಟ್ಟದ ಶ್ರೇಣಿಯಲ್ಲಿ ಉಗಮಿಸುವ ಈ ನದಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹರಿದು, ಕೃಷ್ಣರಾಜಸಾಗರದ ಹಿನ್ನೀರಿನಲ್ಲಿ ಕಾವೇರಿ ನದಿಯನ್ನು ಸೇರುತ್ತದೆ. ಹಾಸನ ಜಿಲ್ಲೆಯ ಗೊರೂರಿನಲ್ಲಿ ಹೇಮಾವತಿ ನದಿಗೆ ಅಡ್ಡವಾಗಿ ಅಣೆಕಟ್ಟೆಯೊಂದನ್ನು ಕಟ್ಟಲಾಗಿದೆ. ಯಗಚಿ ಹೇಮಾವತಿ ನದಿಯ ಮುಖ್ಯ ಉಪನದಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ