ಬಣಕಲ್:ಸಾವರ್ಕರ್ ಯುವ ಪ್ರತಿಷ್ಠಾನದ ಉದ್ಘಾಟನಾ ಕಾರ್ಯಕ್ರಮ ಮತ್ತು ಶಿವದೂತೆ ಗುಳಿಗೆ ತುಳುನಾಟಕ ಪ್ರದರ್ಶನ ಫೆಬ್ರವರಿ ೨೮ ರಂದು ನಡೆಯಲಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಕಾರ್ಯಕ್ರಮದ ವ್ಯವಸ್ಥಾಪಕರಾದ ವಿನಯ್ ಶೆಟ್ಟಿ, ಸಾವರ್ಕರ್ ಯುವ ಪ್ರತಿಷ್ಠಾನದ ಉದ್ಘಾಟನಾ ಕಾರ್ಯಕ್ರಮದ ಹಿನ್ನಲೆಯಲ್ಲಿ ಫೆಬ್ರವರಿ ೨೮ ರಂದು ಬಣಕಲ್ ಸುಭಾಷನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಸಂಜೆ ೬ ಗಂಟೆಗೆ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ನಡೆಯಲಿದೆ.
ವಿಭಿನ್ನ ಶೈಲಿಯ ಈ ತುಳು ನಾಟಕವನ್ನು ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶಿಸಿದ್ದು ಕಲಾಸಂಗಮ್ ತಂಡದ ಕಲಾವಿದರು ಅಭಿನಯಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸರ್ವರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ