ಬಣಕಲ್:ಬಣಕಲ್ ಸುತ್ತಮುತ್ತ ಸೋಮವಾರ ರಾತ್ರಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು ಮಳೆಯಿಂದಾಗಿ ಬಣಕಲ್ ಶ್ರೀವಿದ್ಯಾಭಾರತಿ ಶಾಲೆಯ ಕಬ್ಬಿಣದ ಮೇಲ್ಛಾವಣಿ ಹಾರಿ ಹೋಗಿದೆ.
ಗಾಳಿ ಮಳೆಯ ತೀವ್ರತೆಯಿಂದಾಗಿ ಮೇಲ್ಛಾವಣಿಯ ಕಬ್ಬಿಣದ ಕಂಬಿಗಳು ಬಾಗಿದ್ದು ಗೋಡೆಗಳು ಬಿರುಕು ಬಿಟ್ಟಿದ್ದೆ. ಅಧೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಶಾಲಾ ಸಮಿತಿಯ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು
. ಈ ಸಂದರ್ಭದಲ್ಲಿಮಾತನಾಡಿದ ಶಾಲಾ ಸಮಿತಿಯ ಅಧ್ಯಕ್ಷರಾದ ಶಿವರಾಮ ಶೆಟ್ಟಿ ಮಾತನಾಡಿ, ಸಂಸದರ ಅನುದಾನದಲ್ಲಿ ನಿರ್ಮಿಸಲಾಗಿದ್ದ ಮೇಲ್ಛಾವಣಿ ಗಾಳಿ ಮಳೆಯಿಂದ ಹಾರಿ ಹೋಗಿ ಸುಮಾರು 4 ಲಕ್ಷ ನಷ್ಟ ಸಂಭವಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಅವರಿಗೂ ದುರಸ್ತಿ ಮಾಡಿ ಕೊಡುವಂತೇ ಮನವಿ ಮಾಡಲಾಗಿದೆ. ಶಾಲೆಗೆ ರಜೆ ಇದ್ದುದ್ದರಿಂದ ಮತ್ತು ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದ್ದುರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಬಣಕಲ್ ನ ಶ್ರೀವಿದ್ಯಾಭಾರತಿ ಶಾಲೆಯೂ ಹಲವು ವರ್ಷಗಳಿಂದ ಶೇ 100 ಫಲಿತಾಂಶವನ್ನು ಪಡೆದುಕೊಂಡು ಬರುತ್ತಿದೆ. ಶಾಲೆಗೆ ಬರುವ ರಸ್ತೆಯೂ ಸಂಪೂರ್ಣ ಹಾಳಾಗಿದೆ. ಇದೀಗ ಶಾಲಾ ಕಟ್ಟಡದ ಮೇಲ್ಚಾವಣಿಯೂ ಹಾನಿಯಾಗಿದ್ದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನೆರವಿಗೆ ಬರಬೇಕಿದೆ. ಎಂದರು.
ಈ ಸಂದರ್ಭದಲ್ಲಿ ಶಾಲಾ ಸಮಿತಿಯ ಲಿಂಗಪ್ಪ ಹಾಗೂ ಶಿಕ್ಷಕರು ಇದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ