ಕೊಟ್ಟಿಗೆಹಾರ:ಪದ್ಮಶ್ರೀ ಪ್ರಶಸ್ತಿ ವಿಜೇತ ಖ್ಯಾತ ಮನೋವೈದ್ಯರಾದ ಡಾ. ಸಿ.ಆರ್.ಚಂದ್ರಶೇಖರ್ ಅವರು ಜೂನ್ 13 ರಂದು ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ, ಕಲಿಕೆಗೆ ಸವಾಲು, ನಿರ್ವಹಣೆ ಮತ್ತು ಪರಿಹಾರ ಈ ವಿಷಯವಾಗಿ ಉಪನ್ಯಾಸ ಮತ್ತು ಸಂವಾದ ನಡೆಸಿಕೊಡಲಿದ್ದಾರೆ ಎಂದು ಚಿಕ್ಕಮಗಳೂರಿನ ಕದ್ರಿಮಿದ್ರಿಯ ಕುವೆಂಪು ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿ ಕೆ.ಸಿ ಶಂಕರ್ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಆಧುನಿಕ, ಯಾಂತ್ರಿಕ ವಾತಾವರಣದಲ್ಲಿ ಮಾನಸಿಕ ಒತ್ತಡ ನಿರ್ವಹಣೆಯು ಸುಗಮ ಕಲಿಕೆಗೆ ತುಂಬಾ ಮುಖ್ಯ. ಕಲಿಕಾ ಪ್ರಕ್ರಿಯೆಯಲ್ಲಿ ಪಾಲುದಾರರಾದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮಾನಸಿಕ ಒತ್ತಡ ಸಮಸ್ಯೆಯನ್ನು ಸಮಗ್ರವಾಗಿ ಮತ್ತು ವೈಜ್ಞಾನಿಕವಾಗಿ ತಿಳಿದುಕೊಳ್ಳುವುದು ತುಂಬಾ ಮುಖ್ಯ. ಈ ಹಿನ್ನಲೆಯಲ್ಲಿ ಕದ್ರಿಮಿದ್ರಿಯ ಕುವೆಂಪು ವಿದ್ಯಾನಿಕೇತನ ಸಂಸ್ಥೆಯಲ್ಲಿ ಜೂನ್ 13 ರಂದು ಮನೋವೈದ್ಯರಾದ ಡಾ. ಸಿ.ಆರ್.ಚಂದ್ರಶೇಖರ್ ಅವರು ಮಾತನಾಡಲಿದ್ದಾರೆ ಎಂದರು.
ಈ ಕಾರ್ಯಕ್ರಮದ ಸದುಪಯೋಗವನ್ನು ಶಿಕ್ಷಕರು ಪಡೆದುಕೊಳ್ಳಬಹುದಾಗಿದ್ದು ಪ್ರತಿ ಶಾಲೆಯ ಇಬ್ಬರು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ 9482381758 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ