ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ೯ ಗಂಟೆಗಳ ವಚನ ಕಲ್ಯಾಣ ಎಂಬ ಅಹೋರಾತ್ರಿ ನಾಟಕ ಸಿದ್ದಪಡಿಸಿ ನಾಡಿನಾದ್ಯಂತ ಪ್ರದರ್ಶಿಸಲು ಉದ್ದೇಶಿಸಲಾಗಿದ್ದು ಆಸಕ್ತ ಯುವಕ, ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು ಮತ್ತು ಗಾಯಕರಿಂದ ಅರ್ಜಿ ಆಹ್ವಾನಿಸಲಾಗಿದೆ. ೧೮ ರಿಂದ ೪೦ ವರ್ಷದೊಳಗಿನ ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಮಾ.೨೦ರೊಳಗೆ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ ಬೆಂಗಳೂರು-೫೬೦೦೫೬ ಇಲ್ಲಿಗೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.